ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ನಡುವೆ ಜಗಳವಾಗಿದ್ದು, ದೊಣ್ಣೆಯಿಂದ ಹೊಡೆದು ಮಗನೇ ಅಪ್ಪನನ್ನು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪದಲ್ಲಿ ನಡೆದಿದೆ.
ಕೊಲೆಯಾದವರನ್ನು ಕುಮಾರನಾಯ್ಕ (55) ಎಂದು ಗುರುತಿಸಲಾಗಿದೆ. ಇವರನ್ನು ಮಗ ಮಧು (28) ಕೊಲೆ ಮಾಡಿದ್ದಾನೆ. ಭಾನುವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಮಧು ತನ್ನ ತಂದೆಗೆ ದೊಣ್ಣೆಯಿಂದ ಹೊಡೆದಿದ್ದಾನೆ.

ದೊಣ್ಣೆಯಿಂದ ಹೊಡೆದ ರಭಸಕ್ಕೆ ಕುಮಾರನಾಯ್ಕನ ಕಿವಿಯಲ್ಲಿ ರಕ್ತಸ್ರಾವ ಆಗಿತ್ತು. ಮದ್ಯದ ಅಮಲಿನಲ್ಲಿ ಇದ್ದಿದ್ದರಿಂದ ಕುಮಾರನಾಯ್ಕನಿಗೆ ಇದು ಗೊತ್ತಾಗಿರಲಿಲ್ಲ. ಗಲಾಟೆಯಾದ ನಂತರ ಕುಮಾರನಾಯ್ಕ ಮನೆಯಿಂದ ಹೊರಗೆ ಹೋಗಿದ್ದಾನೆ. ತಡರಾತ್ರಿ ಮನೆಗೆ ವಾಪಸ್ಸಾಗಿ ಮನೆಯ ಜಗುಲಿ ಮೇಲೆ ಮಲಗಿಕೊಂಡಿದ್ದ. ಮಲಗಿದ್ದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
Laxmi News 24×7