Breaking News
Water realised from Basava Sagara (Narayanapura) dam to River Krishna in Vijayapura Dist as water inflow is increased last 4 days. -KPN ### Water realised from Narayanapura dam

ಕೊಯ್ನಾ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

Spread the love

ಚಿಕ್ಕೋಡಿ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ.

ಭಾನುವಾರ 10 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿದ್ದ ಕೊಯ್ನಾ ಆಡಳಿತ ಮಂಡಳಿ ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ನೀರು ಬಿಡುಗಡೆ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ ಏರಿಕೆಯಾಗಿದ್ದು, ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಈಗಾಗಲೇ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಬೆಳಗಾವಿ ಜಿಲ್ಲಾಡಳಿತ ಸೂಚಿಸಿದೆ.

ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 104 ಟಿಎಂಸಿಗಳಷ್ಟು ಭರ್ತಿಯಾಗಿದೆ. ಸದ್ಯ ಕೊಯ್ನಾ ಜಲಾಶಯದ ಪ್ರದೇಶದಲ್ಲೂ ಹೆಚ್ಚಿನ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಅದರ ಜೊತೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲೂ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ