Breaking News

ಸಾರಿಗೆ ನೌಕರರಿಗೆ ಸಿಹಿ ಸುದ್ದಿ?

Spread the love

ಬೆಂಗಳೂರು: ಸಾರಿಗೆ ಮುಷ್ಕರದಿಂದ ಅಮಾನತು, ವಜಾ, ವರ್ಗಾವಣೆ ಮುಂತಾದವುಗಳಿಂದ ಅತಂತ್ರರಾಗಿರುವ ಸಾವಿರಾರು ನೌಕರರ ಬಗ್ಗೆ ಸಹಾನುಭೂತಿ ತೋರಿರುವ ಸರಕಾರ, ಶೀಘ್ರದಲ್ಲೇ ಈ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

ಸಾರಿಗೆ ನೌಕರರ ಹಿತಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಲ್ಕೂ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಚರ್ಚೆ ನಡೆಸಿ, ಮಾಹಿತಿ ಕಲೆಹಾಕಿದರು. ಈ ಸಂದರ್ಭದಲ್ಲಿ ನೌಕರರ ಅಮಾನತು, ವಜಾ ಬಗ್ಗೆಯೂ ಪ್ರಸ್ತಾಪವಾಗಿದ್ದು, ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಶ್ರೀರಾಮುಲು, “ಸಾರಿಗೆ ಇಲಾಖೆ ನೌಕರರ ಹಿತಕ್ಕೆ ನಮ್ಮ ಸರಕಾರ ಬದ್ಧವಾಗಿದ್ದು, ಸೋಮವಾರ ನಮ್ಮ ಎಲ್ಲ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಮ್ಮ ನೌಕರ-ಸಿಬಂದಿ ವರ್ಗದವರ ಹಿತದೃಷ್ಟಿಯಿಂದ ಮಹತ್ವದ ಸಭೆ ನಡೆಸಿದ್ದೇನೆ. ಅತಿ ಶೀಘ್ರದಲ್ಲಿ ಮಹತ್ವದ ನಿರ್ಧಾರಕ್ಕೆ ಬರಲಿದ್ದೇವೆ’ ಎಂದು ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ