Breaking News

ಸಾವಿನಲ್ಲೂ ನಾಲ್ವರ ಪ್ರಾಣ ಉಳಿಸಿ ಸಾರ್ಥಕತೆ ಮೆರೆದ ಹಾವೇರಿ ಯುವತಿ

Spread the love

ಹಾವೇರಿ: 20 ವರ್ಷದ ಯುವತಿಯೊಬ್ಬಳು ಹಲವರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಆ ಮಹಾನ್​ ತಾಯಿ ಹೆಸರು ಕವನ ಮಳ್ಳಯ್ಯ ಹಿರೇಮಠ.

ರಟ್ಟಿಹಳ್ಳಿ ತಾಲೂಕಿನ ಹಳ್ಳೂರು ಗ್ರಾಮದ ಕವನ ಶಿಕಾರಿಪುರದ ಗಾಮೆಂಟ್ಸ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.9ರಂದು ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನ ಗಂಭೀರ ಗಾಯಗೊಂಡಿದ್ದರು. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕವನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಕೋಮಾಗೆ ತಲುಪಿದ್ದರು. ಅವರು ಮಿದುಳು ನಿಷ್ಕ್ರಿಯಗೊಂಡಿತ್ತು.

ಈ ಸುದ್ದಿ ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದ ಮುಗಿಲು ಮುಟ್ಟಿತ್ತು. ಮಗಳಂತೂ ಇನ್ನು ಬದುಕುವಿದಿಲ್ಲ, ಅವಳ ಅಂಗಾಂಗವಾದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಮೃತಳ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಯುವತಿಯ ಕಿಡ್ನಿ, ಹೃದಯ, ಲಿವರ್, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಪ್ರಾಣ ಉಳಿದಿದೆ.

ಯುವತಿಯ ಮೃತದೇಹಕ್ಕೆ ಎಜೆ ಆಸ್ಪತ್ರೆ ವೈದ್ಯರು ಹೂವಿನ ಹಾರ ಹಾಕಿ ಅಂತಿಮ ವಿದಾಯ ಹೇಳಿದ ದೃಶ್ಯ ಮನಕಲಕುವಂತಿತ್ತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ