Breaking News

ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ

Spread the love

ಬೆಳಗಾವಿ: ದೇವಾಲಯಗಳ ತೆರವು ಕಾರ್ಯಾಚರಣೆಗೆ ಈಗಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಕುಂದಾನಗರಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಹಲವು ದೇವಾಲಯಗಳ ತೆರವಿಗೆ ಸಿದ್ಧತೆ ಮಾಡಿಕೊಂಡಿದೆ.

ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.  ಬೆಳಗಾವಿಯ ಹೃದಯ ಭಾಗ ಪಾಂಗೂಳ ಗಲ್ಲಿಯಲ್ಲಿರುವ ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಅಶ್ವತ್ಥಾಮ ದೇವಾಲಯ ತೆರವಿಗೆ ಮುಂದಾಗಿರುವುದಾಗಿ ಜಿಲ್ಲಾಡಳಿತ ನೋಟೀಸ್ ಜಾರಿ ಮಾಡಿದೆ. ಈ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

10 ವರ್ಷಗಳ ಹಿಂದೆ ರಸ್ತೆ ಅಗಲೀಕರಣ ವಿಚಾರವಾಗಿ ಅಶ್ವತ್ಥಾಮ ದೇವಾಲಯ ತೆರವಿಗೆ ಜಿಲ್ಲಾಡಳಿತ ಮುಂದಾಗಿತ್ತು. ಈ ವೇಳೆ ಜನರು ಹೋರಾಟಗಳನ್ನು ಮಾಡಿ ದೇವಸ್ಥಾನವನ್ನು ಉಳಿಸಿಕೊಂಡಿದ್ದರು. ಆದರೆ ಈಗ ಮತ್ತೆ ದೇವಾಲಯಕ್ಕೆ ತೆರವು ಆತಂಕ ಎದುರಾಗಿದೆ.

2009ರ ಬಳಿಕ ನಿರ್ಮಾಣವಾಗಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಜನಾಭಿಪ್ರಾಯ ಸಂಘ್ರಹಿಸಿ ಸ್ಥಳಾಂತರ ಮಾಡಬೇಕು ಇಲ್ಲವೇ ತೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಆದರೆ 2009ಕ್ಕಿಂತಲೂ ಮೊದಲು ನಿರ್ಮಾಣವಾಗಿರುವ ಹಾಗೂ ನೂರಾರು ವರ್ಷಗಳ ಇತಿಹಾಸವಿರುವ ಪುರಾಣ ಪ್ರಸಿದ್ಧ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸುತ್ತಿರುವುದು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ

Spread the love ಗಣಪತಿ ಹಬ್ಬದ ಆಗಮನ — ಗ್ರಾಮೀಣ ಭಾಗದಲ್ಲಿ ಭಕ್ತಿ, ಸಂಭ್ರಮ, ಸಾಂಸ್ಕೃತಿಕ ಚೈತನ್ಯ ಸಾವಳಗಿ ರಾಜ್ಯದಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ