Home / ಜಿಲ್ಲೆ / ಬೆಂಗಳೂರು / ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳ ವರ್ಗಾವಣೆ:ಬಸವರಾಜ ಬೊಮ್ಮಾಯಿ

ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳ ವರ್ಗಾವಣೆ:ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು, ಸೆ. 14: ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿದ್ದಾರೆ. ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆಯಕಟ್ಟಿನ ಜಾಗಕ್ಕೆ ದಕ್ಷ ಹಾಗೂ ಅನುಭವವುಳ್ಳ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರವನ್ನು ಕೈಗೆ ತೆಗೆದುಕೊಳ್ಳುವ ಸರ್ಕಸ್ ಮಾಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಗೆ ಆಯುಕ್ತರಾಗಿದ್ದ ಅನ್ಬುಕುಮಾರ್ ಅವರನ್ನು ವರ್ಗಾವಣೆ ಮಾಡಿದ್ದು, ಆ ಜಾಗಕ್ಕೆ ದಕ್ಷ ಮತ್ತು ಪ್ರಾಮಾಣಿಕತೆ ಮೂಲಕವೇ ರಾಜ್ಯದಲ್ಲಿ ಹೆಸರು ಮಾಡಿರುವ ಡಾ. ಆರ್. ವಿಶಾಲ್ ರವಿ ಅವರನ್ನು ವರ್ಗಾವಣೆ ಮಾಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಾಗಿದ್ದ ಡಾ. ಆರ್. ವಿಶಾಲ್ ಅವರು, ಮೂಲತಃ ಹುಬ್ಬಳ್ಳಿಯವರು. ದಕ್ಷತೆ ಮತ್ತು ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿರುವ ಡಾ. ಆರ್. ವಿಶಾಲ್ ಅವರು ಟೆಡ್ ಟಾಕ್ ವೇದಿಕೆಯಲ್ಲಿ ತನ್ನ ಅಂತರಾಳದ ಮಾತುಗಳನ್ನು ಇತ್ತೀಚೆಗೆ ಹಂಚಿಕೊಂಡಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ( ವೈದ್ಯಕೀಯ ಶಿಕ್ಷಣ ) ಅನಿಲ್ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಈ ಹುದ್ದೆಯನ್ನು ಮೇಲ್ದರ್ಜೆಗೇರಿಸಲಾಗಿದೆ.

 

 

ಹಿಂದುಳಿದ ವರ್ಗವಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಶಂಕರ್ ಅವರ ಜಾಗಕ್ಕೆ ರಶ್ಮಿ ಮಹೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಎಸ್. ಅವರನ್ನು ಸಹಕಾರ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿ ಜಯರಾಂ ಅವರ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ.

 

 

ಅಬಕಾರಿ ಇಲಾಖೆಯ ಆಯುಕ್ತರಾಗಿದ್ದ ರವಿಶಂಕರ್ ಜೆ. ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ( ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದ ವರೆಗೂ ಅಬಕಾರಿ ಆಯುಕ್ತರ ಹುದ್ದೆಯನ್ನು ಹೆಚ್ಚುವರಿ ಜವಾಬ್ಧಾರಿಯನ್ನಾಗಿ ರವಿಶಂಕರ್ ಜೆ. ಅವರಿಗೆ ವಹಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಅನ್ಬುಕುಮಾರ್ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬಿಎಂಟಿಸಿ ಎಂಡಿಯಾಗಿದ್ದ ಡಾ. ಎಂ.ಟಿ. ರೆಜು ಅವರನ್ನು ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದ ವ್ಯವಸ್ಥಾಪಕ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

 

 

ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾದ್ ಮನೋಹರ್ ವಿ. ಅವರನ್ನು ಬೆಂಗಳೂರು ಮಹಾನಗರ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ. ಮಂದಿನ ಆದೇಶದ ವರೆಗೂ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ಮುಂದುವರೆಯಲು ಸೂಚಿಸಲಾಗಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ರವೀಂದ್ರ ಪಿ.ಎನ್. ಅವರನ್ನು ಇನ್ಸ್‌ಪೆಕ್ಟರ್ ಜನರಲ್ ರಿಜಿಸ್ಟ್ರೇಷನ್ ಮತ್ತು ಸ್ಟಾಂಪ್ಸ್ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ ಹುದ್ದೆಯನ್ನು ಪ್ರಭಾರವಾಗಿ ನಿರ್ವಹಣೆ ಮಾಡಲು ಸೂಚಿಸಲಾಗಿದೆ. ಅಂತೂ ಕೆಲವು ಆಯಕಟ್ಟಿನ ಜಾಗಕ್ಕೆ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ವರ್ಗಾವಣೆಯಾಗಿರುವ ಕೆಲವು ಅಧಿಕಾರಿಗಳಿಗೆ ಯಾವುದೇ ಹುದ್ದೆ ಸೂಚಿಸಿಲ್ಲ. ಇನ್ನೂ ಕೆಲವರಿಗೆ ವರ್ಗಾವಣೆ ಮಾಡುವ ಜತೆಗೆ ಹಳೇ ಹುದ್ದೆಗಳನ್ನು ಹೆಚ್ಚುವರಿಯಾಗಿ ಮಂದುವರೆಯಲು ಅವಕಾಶ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ