Breaking News

ರೀತಿಯ ಸೋಗಲ್ಲಿ ಮೋಸ: ಈತನಿಂದ ಮೋಸ ಹೋದವರೆಷ್ಟೋ?; ಮೊಬೈಲ್​ಫೋನಲ್ಲಿತ್ತು 6 ಯುವತಿಯರ ವಿಡಿಯೋ..

Spread the love

ಬೆಂಗಳೂರು: ಈತ ವೃತ್ತಿಯಿಂದ ಆಟೋ ಚಾಲಕ, ಆದರೆ ಚಾಳಿಯಿಂದ ಪ್ರೀತಿಸುವ ಸೋಗಲ್ಲಿ ಯುವತಿಯರನ್ನು ಮೋಸ ಮಾಡಿ ಬ್ಲ್ಯಾಕ್​ಮೇಲ್​ ಮಾಡುವ ಕಿರಾತಕ. ಮೊದಲಿಗೆ ಪ್ರೀತಿಯ ನೆಪದಲ್ಲಿ ಯುವತಿಯರನ್ನು ಬಲೆಗೆ ಬೀಸಿಕೊಂಡು, ನಂತರ ಮಾಡಬಾರದ್ದನ್ನೆಲ್ಲ ಮಾಡಿ, ವಿಡಿಯೋ ಕೂಡ ಮಾಡಿಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡಿ ಹಣವನ್ನೂ ಕಿತ್ತುಕೊಳ್ಳುತ್ತಿದ್ದ.

ಹೀಗೆ ಹುಡುಗಿಯರನ್ನು ವಂಚಿಸುತ್ತಿದ್ದ ರಾಕೇಶದ ಎಂಬಾತನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ಈತ ಪ್ರೀತಿ ಮಾಡುವುದಾಗಿ ಹೇಳಿ ಹುಡುಗಿಯರನ್ನು ಒಲಿಸಿಕೊಂಡು ಬಳಿಕ ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೈಹಿಕ ಸಂಪರ್ಕವನ್ನೂ ನಡೆಸಿ, ಅದರ ವಿಡಿಯೋ ಕೂಡ ಮಾಡಿಟ್ಟುಕೊಂಡಿರುತ್ತಿದ್ದ.

ಕೆಲವು ದಿನಗಳ ಬಳಿಕ ಯುವತಿಯರಿಗೆ ವಾಟ್ಸ್​ಆಯಪ್​ ಮೂಲಕ ಆ ವಿಡಿಯೋ ಕಳುಹಿಸಿ, ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದ. ಮಾತ್ರವಲ್ಲದೆ, ಕೇಳಿದಷ್ಟು ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡುವುದಾಗಿ ಹೇಳಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ.

ಇದೇ ರೀತಿ ಯುವತಿಯೊಬ್ಬಳಿಗೆ ಬ್ಲ್ಯಾಕ್​ಮೇಲ್​ ಮಾಡಿ 2 ಲಕ್ಷ ರೂಪಾಯಿ ಹಣ ಪಡೆದಿದ್ದಲ್ಲದೆ, ಮತ್ತೆ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಇದರಿಂದ ನೊಂದ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಬ್ಯಾಡರಹಳ್ಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಬಂಧಿತನ ಮೊಬೈಲ್​ಫೋನ್ ಪರಿಶೀಲಿಸಿದಾಗ ಆರು ಯುವತಿಯರ ಖಾಸಗಿ ವಿಡಿಯೋ ಇರುವುದು ಕಂಡುಬಂದಿದೆ. ಹೀಗೆ ಈತ ಹಲವು ಯುವತಿಯರ ಜೊತೆ ಪ್ರೀತಿಯ ನಾಟಕವಾಡಿ ದೈಹಿಕ ಸಂಪರ್ಕವನ್ನೂ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದು, ಮೋಸ ಹೋಗಿರುವ ಕೆಲವು ಯುವತಿಯರು ದೂರು ಕೊಡಲು ಹಿಂಜರಿಯುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್​​ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ

Spread the love ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ