ಬೆಳಗಾವಿ – ವಡಗಾವಿಯಲ್ಲಿ ಮಂಗಳವಾರ ರಾತ್ರಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಲಕ್ಷ್ಮಿ ನಗರದಲ್ಲಿ ಪಾನ್ ಬೀಡಾ ಅಂಗಡಿ ನಡೆಸುತ್ತಿದ್ದ 52 ವರ್ಷದ ಬಾಲಕೃಷ್ಣ ಶೆಟ್ಟಿ ಎನ್ನುವವರನ್ನು ರಾತ್ರಿ 10.30ರ ಹೊತ್ತಿಗೆ ಕೊಲೆ ಮಾಡಲಾಗಿದೆ. ಅಂಗಡಿ ಬಂದ್ ಮಾಡಿ ಮನೆಗೆ ಹೋಗುವ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Laxmi News 24×7