Breaking News

ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

Spread the love

ಬೆಂಗಳೂರು –  ನಂಬರ್ ಪ್ಲೇಟ್ ಕೆಳಗಡೆ ಕನ್ನಡ ಧ್ವಜದ ಬಣ್ಣದ ಗೆರೆ ಎಳೆದಿದ್ದಕ್ಕಾಗಿ ಬೈಕ್ ಸವಾರನಿಗೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಈ ಸಾಧನೆ ಮಾಡಿದ್ದಾರೆ.
ಈ ಸ್ಕೂಟರ್ ನ ನಂಬರ್ ಪ್ಲೇಟ್ ನಲ್ಲಿ ಕನ್ನಡದ ಅಭಿಮಾನಿ ಎಳೆದ ಕನ್ನಡದ ಬಾವುಟದ ಗೆರೆ  ಪೋಲಿಸರ ಕಣ್ಣಿಗೆ ಬಿದ್ದಿದೆ. ಬಾಪೂಜಿ ನಗರದಲ್ಲಿ ಆತನನ್ನು ನಿಲ್ಲಿಸಿದ ಪೊಲೀಸರು 500 ರೂಪಾಯಿ   ದಂಡ ಕಟ್ಟಿಸಿಕೊಂಡರು.
ದಂಡದ ಪಾವತಿಯಲ್ಲಿ ಡಿಫರಂಟ್ ರಜಿಸ್ಟರ್ಡ್ ನಂಬರ್ ಪ್ಲೇಟ್ ಎಂದು ಉಲ್ಲೇಖಿಸಲಾಗಿದೆ. ಇದಕ್ಕೆ 500 ರೂ. ದಂಡ ವಿಧಿಸುವ ಮೂಲಕ ಪೊಲೀಸರು ಸಾಧನೆ ಮೆರೆದಿದ್ದಾರೆ. ಕನ್ನಡದ ರಾಜಧಾನಿ ಬೆಂಗಳೂರಿನಲ್ಲೇ ಕನ್ನಡಿಗರಿಗೆ ಈ ಗತಿ.

Spread the love

About Laxminews 24x7

Check Also

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Spread the loveರಾಮನಗರ: ಗ್ಯಾಸ್ ಸಮಸ್ಯೆ  ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್  ಪ್ರತಿಭಟನೆ ನಡೆಸಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ