Breaking News

ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ

Spread the love

ಚಿಕ್ಕೋಡಿ: ಭಾದ್ರಪದ ಮಾಸದ ಪ್ರಥಮ ಮಂಗಳವಾರ ಪ್ರತಿ ವರ್ಷ ವೀರಭದ್ರೇಶ್ವರ ಜಯಂತಿಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಅತಿ ಸರಳವಾಗಿದೆ ಆಚರಣೆ ಮಾಡಿದರು.

 

ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರ ದೇವಸ್ಥಾನದಲ್ಲಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಿ ವಿಶ್ವ ಶಾಂತಿಗಾಗಿ ದೇವರಲ್ಲಿ ಆರಾಧಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಕೊರೊನಾ ಕಾರಣದಿಂದಾಗಿ ಈ ಬಾರಿ ವೀರಭದ್ರೇಶ್ವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ವಿಶ್ವಶಾಂತಿ ಹಾಗೂ ಕೊರೊನಾ ಮಹಾಮಾರಿ ತೊಲಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾರ್ಥನೆ ಮಾಡಲಾಯಿತು ಎಂದರು.


Spread the love

About Laxminews 24x7

Check Also

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

Spread the loveಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ