Breaking News

ಭಾರೀ ಮಳೆ- ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು

Spread the love

ಬಾಗಲಕೋಟೆ: ಭಾರೀ ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ.

ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ ಸೇತುವೆ ಮೂಲಕ ಸಂಚಾರ ನಡೆದಿದೆ.

 

ಇದೇ ವರ್ಷದಲ್ಲಿ ಎರಡನೇ ಬಾರಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸೇತುವೆ ಮೇಲೆ ಮೊಳಕಾಲುದ್ದ ನೀರು ಹರಿಯುತ್ತಿದ್ದು, ನದಿ ತೀರದ ಜಮೀನಿನಲ್ಲಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ.


Spread the love

About Laxminews 24x7

Check Also

ಆದಿ ರೇಣುಕಾಚಾರ್ಯರ ತತ್ವಗಳಿಗೆ ಭಾರತೀಯ ಸಾಮಾಜಿಕ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನ: ಗದ್ದಿಗೌಡರ

Spread the loveಬಾಗಲಕೋಟೆ: ವೀರಶೈವ ಧರ್ಮದ ಸಂಸ್ಥಾಪಕರಾದ ಆದಿ ಜಗದ್ಗುರು ರೇಣುಕಾಚಾರ್ಯರು, ಇವರ ತತ್ವ, ಬದುಕಿನ ಚರಿತ್ರೆ, ಮತ್ತು ಧಾರ್ಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ