Breaking News

ಫೋಟೋಗೆ ಪೋಸ್ ಕೊಡಲು ಹೋಗಿ ಸಮುದ್ರದ ಪಾಲಾದ ವ್ಯಕ್ತಿ

Spread the love

ಕಾರವಾರ: ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ. ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ.ಮಳೆ ಹೆಚ್ಚಾಗುತ್ತಿರುವುದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಬೃಹತ್ ಗಾತ್ರದ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ. ಇದಾವುದನ್ನೂ ಅರಿಯದ ಪ್ರವಾಸಿಗರು, ಸಮುದ್ರದ ತಟದಲ್ಲಿ ಫೋಟೋಗೆ ಪೋಸ್ ಕೊಡಲು ಮುಂದಾಗುತ್ತಾರೆ. ಅದೇ ರೀತಿ ಪೋಸ್ ಕೊಡಲು ಹೋಗಿ ವ್ಯಕ್ತಿ ಇದೀಗ ಸಮುದ್ರದ ಪಾಲಾಗಿದ್ದಾರೆ. ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ