Breaking News

ಗಂಡು ಮಗು ಮಾರಾಟ

Spread the love

ವಿಜಯಪುರ : ಸಾಕಲು ಆಗದ ಕಾರಣಕ್ಕೆ ಗಂಡು ಮಗುವಿನ ಮಾರಾಟ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ರಾಜ್ಯ ಮಟ್ಟದ ಕಾಯಕಲ್ಪಪ್ರಶಸ್ತಿ ಪಡೆದ ಜಿಲ್ಲಾಸ್ಪತ್ರೆಯಲ್ಲಿ ಆ.26ರಂದು ಈ ಘಟನೆ ನಡೆದಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಸದಾಶಿವ ಕಾಂಬಳೆ ಎಂಬ ಮಹಿಳೆ ಆ.19ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕಸ್ತೂರಿ ಎಂಬ ನರ್ಸ್ ಪರಿಚಯವಾಗಿ ಮಗು ಕೊಡುತ್ತೀಯಾ ಎಂದು ಕೇಳಿದ್ದಾರೆ. ಮನೆಯಲ್ಲಿ ವಿಚಾರಿಸುವುದಾಗಿ ರೇಣುಕಾ ತಿಳಿಸಿದ್ದಾರೆ. ಆಕೆ ಆ.24ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಆ.26ರಂದು ಬೆಳಗ್ಗೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ನರ್ಸ್ ಕಸ್ತೂರಿ ಅವರನ್ನು ಭೇಟಿಯಾಗಿ 5 ಸಾವಿರ ರೂ. ಪಡೆದು ಮಗು ನೀಡಿದ್ದಾರೆ. ಹಣ ತೆಗೆದುಕೊಂಡು ಹೋಗಿದ್ದ ರೇಣುಕಾ ಬಳಿಕ ಮಗು ಬೇಕೆಂದು ಮರಳಿ ನರ್ಸ್ ಬಳಿ ಬಂದಿದ್ದಾರೆ. ಆದರೆ ಮಗು ಸಿಗದೇ ಇದ್ದಾಗ ಮಕ್ಕಳ ಸಹಾಯವಾಣಿಗೆ ದೂರು ನೀಡಲಾಗಿದೆ. ಮಕ್ಕಳ ಸಹಾಯವಾಣಿ ಸಿಬ್ಬಂದಿ ಸೆ.12ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂವರ ವಿರುದ್ಧ ವಿರುದ್ಧ ಪ್ರಕರಣ ದಾಖಲಾಗಿದ್ದು ನರ್ಸ್ ಕಸ್ತೂರಿ ಅವರನ್ನು ಅಮಾನತುಗೊಳಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ