Breaking News

ನನ್ನನ್ನು ಬದುಕಿಸಬೇಡಿ, ಸಾಯಬೇಕು: ಧಾರವಾಡದ ಆಸ್ಪತ್ರೆಯಲ್ಲೇ ಶುಶ್ರೂಷಕಿ ಆತ್ಮಹತ್ಯೆ ಯತ್ನ

Spread the love

ಧಾರವಾಡ): ಧಾರವಾಡದ ಹೆಬ್ಬಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಶುಶೂಷಕಿ ಆಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಕಮಲಾ ನಾಗೇಶ್ವರರಾವ್, ಆತ್ಮಹತ್ಯೆಗೆ ಯತ್ನಿಸಿದ ಶುಶ್ರೂಷಕಿಯಾಗಿದ್ದಾರೆ. ಇವರು ಹಿರಿಯ ಆರೋಗ್ಯ ಶುಶ್ರೂಷಕಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೇಲಾಧಿಕಾರಿಗಳ ಕಿರುಕುಳ ನೀಡುತ್ತಿರುವುದಾಗಿ ಹೇಳಿದ ಇವರು ತಾವು ಸಾಯಬೇಕು, ನನ್ನನ್ನು ಬದುಕಿಸಬೇಡಿ ಎಂದು ಹೇಳುತ್ತಲೇ ಆಸ್ಪತ್ರೆ ಕೊಠಡಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ.

ಕೂಡಲೇ ಇವರನ್ನು ಇತರೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನೇರವಾಗಿ ಡಿಎಚ್‌ಒ ಮೇಲೆ ಆರೋಪ ಮಾಡಿರೋ ಕಮಲಾ ಅವರು, ಅವರ ಕಿರುಕುಳದಿಂದಲೇ ತಾವು ಸಾಯಲು ಹೊರಟಿದ್ದು, ತಮ್ಮನ್ನು ಬದುಕಿಸಬೇಡಿ ಎಂದಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ