ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ.
ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ.
ಬಸ್ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ.
ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್‌ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್ ಬಾಗಿಲಲ್ಲಿ ನೇತಾಡುತ್ತ ಸಂಚಾರ ಮಾಡುತ್ತಿದ್ದಾರೆ.
ಮಧ್ಯಾಹ್ನ 3 ಗಂಟೆಯ ಬಸ್ ತಪ್ಪಿದರೆ ಮತ್ತೆ ಸಂಜೆವರೆಗೆ ಯಾವುದೇ ಬಸ್ ಇಲ್ಲ. ಆದ್ದರಿಂದ ಬಸ್ ಪಾಸ್ ಇರುವ ವಿದ್ಯಾರ್ಥಿಗಳ ಪರದಾಟ ನಡೆಸಿದ್ದು ಸಾರಿಗೆ ಸಚಿವರು ಮಾತ್ರ ಇದರತ್ತ ಗಮನ ಹರಿಸಿಲ್ಲ.ಜೊತೆಗೆ ಅಧಿಕಾರಿಗಳಿಗೆ ಎಷ್ಟು ಮನವಿ ಮಾಡಿದರು ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7