ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಮಾತ್ರ ಶುಲ್ಕ ಸ್ವೀಕರಿಸಬೇಕು, ಶೇ.30ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಕರ್ನಾಟಕದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್ ) ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.
ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, 2019-20ನೇ ಸಾಲಿನಲ್ಲಿ ಎಷ್ಟು ಶುಲ್ಕವನ್ನು ಸಂಗ್ರಹ ಮಾಡಲಾಗಿತ್ತೋ ಅದರಲ್ಲಿ ಶೇ.15ರಷ್ಟು ವಿನಾಯ್ತಿ ನೀಡಿ, 2020-21ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಶುಲ್ಕವನ್ನು ಸಂಗ್ರಹಿಸಿಲು ನ್ಯಾಯಾಲಯ ಅವಕಾಶ ಕಲ್ಪಿಸಿದೆ.
Laxmi News 24×7