Breaking News

ಬೈಕ್ ಸವಾರನ ಎಡವ‌ಟ್ಟು: ಇನ್ನೊಬ್ಬ ಸವಾರನ ಕೈಮೇಲೆ ಹರಿದ ಲಾರಿ ಚಕ್ರ

Spread the love

ಚಿಕ್ಕಮಗಳೂರು: ಫೋನ್‌ನಲ್ಲಿ ಮಾತಾಡಿಕೊಂಡು ಬಂದ ಬೈಕ್ ಸವಾರನ ಎಡವಟ್ಟಿನಿಂದಾಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್‌ ಸವಾರನ ಕೈಮೇಲೆ ಲಾರಿ ಚಕ್ರ ಹರಿದು ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಏಕಮುಖ ಸಂಚಾರದಲ್ಲಿ ಫೋನ್ ನಲ್ಲಿ ಮಾತನಾಡಿಕೊಂಡು ಬರುತ್ತಿದ್ದ ಬೈಕ್ ಸವಾರ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್‌ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಮತ್ತೊಂದು ಬೈಕ್ ಸವಾರನ ಕೈಮೇಲೆ ಲಾರಿ ಚಕ್ರ ಹರಿದಿದ್ದು, ಸವಾರ ಸುಂದರ್ ಎಡಗೈಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ, ಕಾಂಗ್ರೆಸ್ ಕಚೇರಿ ಮುಂಭಾಗ ನಡೆದ ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ