ಮೈಸೂರು: ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ.
ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಪೊಲೀಸ್ ಠಾಣೆ ಪೊಲೀಸರು ತಕ್ಷಣವೇ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Laxmi News 24×7