Breaking News

ಹಸುಗೂಸಿನ ತಾಯನ್ನು ಕಸಿದ ಕರೊನಾ: 5 ತಿಂಗಳ ಬಾಣಂತಿ ಸಾವು

Spread the love

ಶಿವಮೊಗ್ಗ: ಕರೊನಾ ಸೋಂಕಿಗೆ ಒಳಗಾಗಿದ್ದ ಐದು ತಿಂಗಳ ಬಾಣಂತಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಸುಗೂಸಿನಿಂದ ದೂರವಾಗಿದ್ದು ಬರೋಬ್ಬರಿ ಮೂರು ತಿಂಗಳು ಜೀವಕ್ಕಾಗಿ ಹೋರಾಡಿದ ಭದ್ರಾವತಿ ತಾಲೂಕಿನ ದಿಗ್ಗೇನಹಳ್ಳಿಯ ಸುಪ್ರಿಯಾ(35) ಮೃತರು.

ಸುಪ್ರಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಜೂನ್ 19 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಮೂರು ತಿಂಗಳು ಆಸ್ಪತ್ರೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸೋಂಕು ಉಲ್ಬಣಗೊಂಡಾಗ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಕರೊನಾ ಮಾರ್ಗಸೂಚಿ ಅನ್ವಯ ರೋಟರಿ ಚಿತಾಗಾರದಲ್ಲಿ ಮಹಿಳೆಯ ಅಂತ್ಯಕ್ರಿಯೆ ನೆರವೇರಿದೆ.

ಆಸ್ಪತ್ರೆಗೆ ಮಹಿಳೆ ದಾಖಲಾಗುವುದಕ್ಕೆ ಎರಡು ತಿಂಗಳ ಹಿಂದೆ ಮಗು ಜನಿಸಿತ್ತು. ಕರೊನಾ ಹಿನ್ನೆಲೆಯಲ್ಲಿ ಮಗುವನ್ನು ತಾಯಿಯಿಂದ ದೂರವಿರಿಸಿ ಕುಟುಂಬಸ್ಥರೇ ಆರೈಕೆ ಮಾಡುತ್ತಿದ್ದರು. ಕರೊನಾ ಇಳಿಮುಖವಾಗುತ್ತಿರುವ ನಡುವೆಯೇ ಮಹಿಳೆ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ಆರ್​ಎಸ್​ಎಸ್​ ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಪರಿಶೀಲನೆ

Spread the loveಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆ ಚಟುವಟಿಕೆಗಳನ್ನು ನಿಷೇಧಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶೀಲಿಸಿ ಕ್ರಮವಹಿಸಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ