ಧಾರವಾಡ: ಪೊಲೀಸರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆದ ಘಟನೆ ನಗರದ ವಿವೇಕಾನಂದ ವೃತ್ತದ ಬಳಿ ನಡೆದಿದೆ.

ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಓಡಿ ಹೋಗಿರೋ ಅಪರಿಚಿತ ವ್ಯಕ್ತಿಗಳ ವಿರುದ್ಧ ಪಿಜಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದು ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ಜೊತೆ ವಿದ್ಯಾರ್ಥಿಗಳು ಹಾಗೂ ಸ್ಥಳಿಯರ ನಡುವೆ ಮಾತಿನ ಚಕಮಕಿ ನಡೆದಿದೆ. ಸದ್ಯ ಎಸಿಪಿ ಅನುಷಾ, ಉಪನಗರ ಪೊಲೀಸ್ ಠಾಣೆ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದಿದ್ದಾರೆ.
Laxmi News 24×7