Breaking News

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ: ಖದೀಮರ ಬಂಧನ

Spread the love

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಲ್ಲಿ ನಕಲಿ ಖಾತೆ ತೆರೆದು, ವಂಚಿಸುತ್ತಿದ್ದ ಮೂವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಮುಜಾಹಿದ್, ಇಕ್ಬಾಲ್ ಮತ್ತು ಆಸಿಫ್ ಬಂಧಿತರಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಜಾಲತಾಣಗಳಲ್ಲಿ ಪುರುಷರನ್ನು ಪರಿಚಯ ಮಾಡಿಕೊಂಡು ಅವರ ಜತೆ ಸಲುಗೆಯಿಂದ ಮಾತಾಡಿ, ಅವರ ಬೆತ್ತಲೆ ವಿಡಿಯೋವನ್ನು ಸೆರೆಹಿಡಿದು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡುತ್ತಿತ್ತು ಎಂದು ತಿಳಿದುಬಂದಿದೆ.

ಸೈಬರ್ ಖದೀಮರು ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಸೋಗಿನಲ್ಲಿ ಪುರುಷರನ್ನು ಪರಿಚಯಿಸಿಕೊಂಡು, ಲೈಂಗಿಕ ಸಂಭಾಷಣೆಯಲ್ಲಿ ತೊಡಗುತ್ತಿದ್ದರು. ಬಳಿಕ ಅವರು ಬೆತ್ತಲೆಯಾಗುವಂತೆ ಪ್ರೇರೇಪಿಸುತ್ತಿದ್ದರಂತೆ. ಅವರಿಗೆ ತಿಳಿಯದಂತೆ ನಗ್ನಚಿತ್ರ ಮತ್ತು ವಿಡಿಯೋಗಳನ್ನು ಸ್ಕ್ರೀನ್ ರೆಕಾರ್ಡ್ ಮಾಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದರಂತೆ. ಹಣ ಕೊಡದಿದ್ದರೆ, ವಿಡಿಯೋವನ್ನು ಜಾಲತಾಣಗಳಿಗೆ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕತ್ತಿದ್ದರು ಎನ್ನಲಾಗ್ತಿದೆ. ಜುಲೈ 22 ರಂದು ಸಿಐಡಿಯ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ