Breaking News

ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು.

ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮೂಡಲಗಿಗೆ ಅಗತ್ಯವಿರುವ ಉಪ ನೋಂದಣಿ ಕಛೇರಿ ಮಂಜೂರಾತಿಗೆ ಮನವಿ ಮಾಡಿಕೊಳ್ಳಲಾಗಿದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬೊಮ್ಮಾಯಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಡತ ಮಂಡಿಸಲು ಸೂಚಿಸಿದ್ದು, ನವೆಂಬರದೊಳಗಾಗಿ ಉಪ ನೋಂದಣಿ ಕಛೇರಿ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ