Breaking News

ಅಪಘಾತದಿಂದ ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ

Spread the love

ವಿಜಯಪುರ: ನಗರದಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ನಡೆದಿದೆ. ಯಾರೋ ಬೈಕ್‍ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾರೆ. ಪರಿಣಾಮ ಬೈಕ್ ಮೇಲಿಂದ ಬಿದ್ದು, ಗಾಯಗೊಂಡು ಯುವಕ, ಯುವತಿ ಒದ್ದಾಡಿದ್ದಾರೆ. ಅಲ್ಲದೆ ಸಹಾಯಕ್ಕಾಗಿ ಅಂಗಲಾಚಿದ ಹೃದಯವಿದ್ರಾವಕ ಘಟನೆ ನಡೆದಿದೆ.

 

ನಗರದ ಜುಮನಾಳ ರಸ್ತೆಯ ದದಾಮಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ. ಕಾಪಾಡುವಂತೆ ಯುವಕ, ಯುವತಿ ಅಂಗಲಾಚುತ್ತಿದ್ದ ವಿಡಿಯೋ ವೈರಲ್ ಆಗಿದೆ. ರಸ್ತೆಯಲ್ಲಿ ಒದ್ದಾಡುತ್ತ, ಕಾಪಾಡಿ ಎಂದು ಬೈಕ್ ಸವಾರರಾದ ಸಚಿನ್, ಸುಜಾತಾ ಅಂಗಲಾಚಿದ್ದಾರೆ. ಕಾಲು ಮುರಿದು ರಕ್ತದ ಮಡುವಿನಲ್ಲಿ ಬಿದ್ದು ಯುವಕ ಸಚಿನ್ ಚೀರಾಟ ನಡೆಸಿದ್ದಾನೆ.

 

ಕೊನೆಗೆ ಯುವಕ ಸಚಿನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಯುವತಿ ಸುಜಾತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಡಿ ತಾಲೂಕಿನ ಬೂದಿಹಾಳ ಗ್ರಾಮದ ನಿವಾಸಿ ಸಚಿನ್ ಬಿಎಲ್‍ಡಿಇ ಕಾಲೇಜಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದ. ತಿಕೋಟ ಪಟ್ಟಣದ ಮಠಪತಿ ಗಲ್ಲಿಯ ನಿವಾಸಿ ಸುಜಾತಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದಾರೆ. ನಿನ್ನೆ ಸಾಯಂಕಾಲ ಈ ಘಟನೆ ನಡೆದಿದ್ದು, ಅಪರಿಚಿತ ವಾಹನದಿಂದ ಡಿಕ್ಕಿಯಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ