Breaking News

ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ: ಪ್ರಹ್ಲಾದ ಜೋಶಿ

Spread the love

ದಾವಣಗೆರೆ: ಸ್ಪೆಷಲ್ ಡ್ರೈವ್‌ಗೂ ಮುನ್ನ ದೇಶದಲ್ಲಿ 60 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದನ್ನು ಸೋನಿಯಾ ಗಾಂಧಿ ನೀಡಿದ್ದಾರಾ. ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ ಬಂದಿದೆ ಎಂದು ಕೊರೊನಾ ವಿಚಾರವಾಗಿ ವಿರೋಧ ಪಕ್ಷಗಳ ವಾದಕ್ಕೆ ಸಂಬಂಧಪಟ್ಟಂತೆ ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬಳಿಕ ಪಂಜಾಬ್ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿದ ಅವರು, ಇದ್ದ ಒಬ್ಬ ಮುಖ್ಯಮಂತ್ರಿಯನ್ನೂ ಕಾಂಗ್ರೆಸ್ ತೆಗೆದುಹಾಕಿದೆ. ಪಂಜಾಬ್ ಸಿಎಂ ರನ್ನು ತೆಗೆದುಹಾಕಿ ಕಾಂಗ್ರೆಸ್ ಗೊಂದಲದಲ್ಲಿದೆ. ಅಮರೀಂದರ್ ಸಿಂಗ್ ಸಮರ್ಥ ಮುಖ್ಯಮಂತ್ರಿಯಾಗಿದ್ದರು. ರಾಹುಲ್, ಸೋನಿಯಾಗಿಂತ ಕ್ಯಾಪ್ಟನ್ ಅಮರೀಂದರ್ ಸಿಂಗ್ ಜನಪ್ರಿಯತೆ ಪಡೆಯುತ್ತಿದ್ದರು. ಹೀಗಾಗಿ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಆಗಲು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿಯಿದೆ. ಹೀಗಾಗಿಯೇ ಹೈಕಮಾಂಡ್ ಓಲೈಸಲು ಹೇಳಿಕೆ ನೀಡುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ