Breaking News

ಮಾಜಿ ಕೇಂದ್ರ ಸಚಿವರಿಗೆ ‘ವಿಡಿಯೋ’ ಸಂಕಷ್ಟ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ‘ಡಿ.ವಿ ಸದಾನಂದಗೌಡ’

Spread the love

ಬೆಂಗಳೂರು : ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರ ವಿರುದ್ಧ ವಿಡಿಯೋವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಡಿ ವಿ ಸದಾನಂದಗೌಡರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಗೆ ದೂರು ನೀಡಿದ ಸದಾನಂದಗೌಡರು ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, ನನ್ನ ಇಮೇಜ್ ಹಾಳು ಮಾಡಲೆಂದು ಈ ವಿಡಿಯೋ ಹರಿಬಿಡಲಾಗಿದೆ’ ಎಂದು ಆರೋಪಿಸಿದ್ದಾರೆ.

‘ವಿಡಿಯೋದಲ್ಲಿರುವ ವ್ಯಕ್ತಿ ನಾನಲ್ಲ, ಇಂಪರ್ಸೊನೇಷನ್ ಮೂಲಕ ಈ ವಿಡಿಯೋ ಸಿದ್ದಪಡಿಸಲಾಗಿದೆ. ಈ ವಿಡಿಯೋ ಒಬ್ಬರಿಂದ ಒಬ್ಬರಿಗೆ ಹೋಗುವ ಮುನ್ನ ಕ್ರಮ ಕೈಗೊಳ್ಳಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ