Breaking News

ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು

Spread the love

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ.

ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ.

ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಬಾಣತಿಯರು ಆಸ್ಪತ್ರೆಯ ಆವರಣದಲ್ಲೇ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ,
ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಜಿಪಂ ಸಿಇಒ ಮಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಕ್ಷಣ ದುರಸ್ತಿ ಕಾರ್ಯ ನಡೆಸಲು ಸೂಚನೆ ನೀಡಿದರು.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ