ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ ನಾಲ್ಕು ದಿನ ಮಳೆ ಮುಂದುವರಿಯಲಿದೆ. ಬೆಂಗಳೂರು, ದ.ಕ,ಉ.ಕ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿಯೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ.
Laxmi News 24×7