Breaking News
Home / ರಾಜಕೀಯ / ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದು ಪತ್ತೆ

ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದು ಪತ್ತೆ

Spread the love

ಬೆಂಗಳೂರು: 2020ರಿಂದ ಈವರೆಗೂ ರಾಜ್ಯ ಪೊಲೀಸರು ಹಾಗೂ ಕೇಂದ್ರಿಯಾ ತನಿಖಾ ಸಂಸ್ಥೆಗಳಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದನ್ನು ಪತ್ತೆ ಮಾಡವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ಹೇಳಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ `ಸ್ಯಾಟಲೈಟ್ ನ್’ ಬಳಕೆಯ ಸುದ್ದಿಗಳು ಆಗಾಗ ಮಾಧ್ಯಮಗಳಲ್ಲಿ ಬರುತ್ತಿದ್ದು ಈ ಸಂಶಯದ ಬಗ್ಗೆ ಸರಕಾರ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯ ಯು.ಟಿ ಖಾದರ್ ಅವರು ನಿನ್ನೆ ವಿಧಾನಸಭೆಯಲ್ಲಿ ಆಗ್ರಹಿಸಿದರು.

ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಮಾಡಲಾಗುತ್ತಿದೆ ಎಂದು ಸುದ್ದಿಗಳು ಬಿತ್ತರವಾಗುತ್ತಿದ್ದು, ಆ ಭಾಗದ ಜನತೆ ಗೊಂದಲದಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಿ ಸರಕಾರ ಅಧಿಕೃತ ಹೇಳಿಕೆಯನ್ನು ನೀಡಬೇಕು’ ಎಂದು ಒತ್ತಾಯಿಸಿದರು.

`ವರ್ಷದ ಹಿಂದೆಯೂ ಸ್ಯಾಟ್‍ಲೈಟ್ ಫೋನ್ ಸುದ್ದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯುವಕನೊಬ್ಬನ ಮೇಲೆ ವಿನಾಕಾರಣ ಆರೋಪ ಮಾಡಲಾಗಿತ್ತು. ಆದರೆ, ಪರಿಶೀಲನೆ ನಡೆಸಿದರೆ ಆ ಆರೋಪ ಸುಳ್ಳಾಗಿತ್ತು’ ಎಂದು ಖಾದರ್ ಗಮನ ಸೆಳೆದರು.

ಖಾದರ್ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, `ರಾಜ್ಯದ ಕರಾವಳಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಸ್ಯಾಟಲೈಟ್ ಪೋನ್ ಬಳಕೆ ದೇಶದಲ್ಲಿ ನಿಷೇಧಿಸಲಾಗಿದೆ. ಆದರೂ ಅಲ್ಲಲ್ಲಿ ಬಳಕೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ’ ಎಂದು ಸ್ಪಷ್ಟಪಡಿಸಿದರು.

2011ರ ಮುಂಬೈ ದಾಳಿಯ ಬಳಿಕ ರಾಜ್ಯದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ನಿಷೇಧ ಮಾಡಲಾಗಿತ್ತು ಆದರೆ, ರಾಜ್ಯದಲ್ಲಿ ಕಳೆದ 2020ರಲ್ಲಿ 256 ಮತ್ತು 2021ರಲ್ಲಿ 220 ಕರೆಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡುವುದು ಪತ್ತೆ ಮಾಡಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಜೊತೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ದೇಶದ ಭದ್ರತೆ ವಿಷಯವೂ ಇದಾಗಿದ್ದು ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ, ಆತಂಕಪಡುವ ಅಗತ್ಯವಿಲ್ಲ. ಮೂಲ ಪತ್ತೆಹಚ್ಚುವ ಕೆಲಸ ಮಾಡಲಾಗುವುದು.

ಕೇಂದ್ರ ಸರ್ಕಾರದ ಏಜೆನ್ಸಿಗಳಾಗ ಸಂಶೋಧನಾ ಮತ್ತು ವಿಶ್ಲೇಷಣಾ ದಳ (ರಾ), ಗುಪ್ತಚರ ದಳದಂತಹ (ಐಬಿ) ಸಂಸ್ಥೆಗಳು ನೀಡುವ ಮಾಹಿತಿ ಅವಲೋಕಿಸಿ ಸ್ಥಳೀಯ ಪೊಲೀಸರು ತನಿಖೆ ಕೈಗೊಳ್ಳುತ್ತಾರೆ. ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿಗೆ ಹೇಳಲು ಸಾಧ್ಯವಿಲ್ಲ ಎಂದಷ್ಟೇ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ