Breaking News

ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ.

ಅಂದಹಾಗೇ ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದಂತ ಮಸೀದಿ ಕುರಿತಂತೆ ಸ್ಥಳೀಯ ನಿವಾಸಿ ಸ್ಯಾಮ್ ಫಿಲಿಪ್ ಹಾಗೂ ಮತ್ತಿತರರು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ಕುರಿತಂತೆ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಅಕ್ರಮವಾಗಿ ನಿರ್ಮಾಣ ಮಾಡುತ್ತಿದ್ದಂತ ಹೆಚ್ ಬಿ ಆರ್ ಲೇಔಟ್ ನ ಮಸೀದಿ ತೆರವಿಗೆ ಆದೇಶಿಸಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ