Breaking News

ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್ ಪತ್ತೆಗೆ ‘ಬಿಗ್ ಟ್ವಿಸ್ಟ್’..! ಸುರಂಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ

Spread the love

ತುಮಕೂರು : ಇಲ್ಲಿನ ರಿಂಗ್ ರಸ್ತೆಯ ಲಾಡ್ಜ್​ವೊಂದರ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಪೊಲೀಸರು ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ನಡೆಸಲು ಕಳ್ಳಮಾರ್ಗವಾಗಿದ್ದ ಸುರಂಗವೊಂದನ್ನು ಪತ್ತೆಹಚ್ಚಿದ್ದಾರೆ. ಈ ಸುರಂಗದಲ್ಲಿ ಅಡಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುರಂಗದೊಳಗೆ ಇಬ್ಬರು ಮಹಿಳೆ ಹಾಗೂ ಓರ್ವ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಅಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಈ ಲಾಡ್ಜ್ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೋಮ್‌ಗಳು ಪತ್ತೆ ಆಗಿದ್ದವು. ವಿಷಯ ತಿಳಿದು ತನಿಖೆ ಆರಂಭಿಸಿದ್ದ ಒಡನಾಡಿ ಸಂಸ್ಥೆ ನಿಖರ ಮಾಹಿತಿ ಅನ್ವಯ ಲಾಡ್ಜ್​ ಮೇಲೆ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಿದೆ. ಈಗಾಗಲೇ ಘಟನೆ ಸಂಬಂಧ ಒಟ್ಟು ಐವರನ್ನು ಬಂಧಿಸಿದ್ದು, ಲಾಡ್ಜ್​ನ್ನು ವಶಕ್ಕೆ ಪಡೆದ ತುಮಕೂರು ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ