Breaking News

ಪತ್ನಿಯ ಮೊಬೈಲ್ ನೋಡಿದ ರಿಯಲ್​ ಎಸ್ಟೇಟ್​ ಉದ್ಯಮಿ: ಮುಂದೆ ನಡೆದಿದ್ದು ಘನ ಘೋರ ಘಟನೆ

Spread the love

ಬೆಂಗಳೂರು: ಅನ್ನಪೂರ್ಣೇಶ್ವರಿನಗರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಚೂರಿಯಿಂದ ಕತ್ತಿಗೆ ಇರಿದು ಹತ್ಯೆ ಮಾಡಿದ್ದಾನೆ.

ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ.

ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ಪ್ರತಿನಿತ್ಯ ಪತ್ನಿಯ ಶೀಲ ಶಂಕಿಸಿ ಪತಿ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡು ಬಂದಿತ್ತು. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು. ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ಪತ್ನಿ ರೂಪಾ ಕತ್ತಿಗೆ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಟ್ಯೂಷನ್‌ಗೆ ಹೋಗಿದ್ದ ಮಗ ಮನೆಗೆ ವಾಪಾಸ್ಸಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನಪೂಣೇಶ್ವರಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರಸಿಕೊಂಡಿರುವ ಕಾಂತರಾಜ್‌ಗೆ ಶೋಧ ಮುಂದುವರೆದಿದೆ.


Spread the love

About Laxminews 24x7

Check Also

ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನ ಶಿವಾನಂದ ಗ್ರಾಮೀಣ ವಿದ್ಯಾಪೀಠ ಜ್ಞಾನಕೇಂದ್ರವಾಗಿ ಬೆಳೆಯಲಿ: ಸಚಿವ ಸತೀಶ್‌ ಜಾರಕಿಹೊಳಿ: ಸಚಿವ ಸತೀಶ್‌ ಜಾರಕಿಹೊಳಿ

Spread the loveಹುಕ್ಕೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯಲೆಂಬ ಉದ್ದೇಶದಿಂದ ಶಿವಾನಂದ ಗ್ರಾಮೀಣ ವಿದ್ಯಾಪೀಠಕ್ಕೆ 9 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ