Breaking News

ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.26ರಂದು

Spread the love

ಬೆಳಗಾವಿ – ಕೇಂದ್ರದ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.26ರಂದು ನಡೆಯಲಿದೆ.

ಅಂದು ಬೆಳಗ್ಗೆ 10.30ಕ್ಕೆ ಸುರೇಶ ಅಂಗಡಿ ಎಜುಕೇಶನ್ ಇನ್ ಸ್ಟಿಟ್ಯೂಟ್ ಆವರಣದಲ್ಲಿ ಪುತ್ಥಳಿ ಅನಾವರಣಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ಸೇರಿದಂತೆ ಹಲವಾರು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಸುರೇಶ ಅಂಗಡಿ ಕೇಂದ್ರದ ರೈಲ್ವೆ ಸಚಿವರಾಗಿ ಕೆಲಸ ಮಾಡುತ್ತಿರುವಾಗಲೇ, 2020ರ ಸೆಪ್ಟಂಬರ್ 23ರಂದು ಕೊರೋನಾದಿಂದಾಗಿ ನಿಧನರಾದರು. ಸಚಿವರಾಗಿ ಬೆಳಗಾವಿ ಹಾಗೂ ರಾಜ್ಯಕ್ಕೆ ಹಲವಾರು ಮಹತ್ವದ ಕೊಡುಗೆಗಳನ್ನು ನೀಡುವ ಮೂಲಕ ಜನರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ.

ನಂತರ ನಡೆದ ಚುನಾವಣೆಯಲ್ಲಿ ಅವರ ಪತ್ನಿ ಮಂಗಲಾ ಅಂಗಡಿ ಬೆಳಗಾವಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇದೀಗ ಸುರೇಶ ಅಂಗಡಿ ಅವರ ಪುತ್ಥಳಿಯನ್ನು ಅವರು ಕಟ್ಟಿ ಬೆಳೆಸಿದ ಕಾಲೇಜಿನ ಆವರಣದಲ್ಲಿ ಸ್ಥಾಪಿಸಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ