Breaking News

ನಾಡಹಬ್ಬ ದಸರಾ ಉದ್ಘಾಟನೆಗೆ ಇಬ್ಬರ ಹೆಸರು ಶಿಫಾರಸು

Spread the love

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ದಸರಾ ಉದ್ಘಾಟಕರ ಆಯ್ಕೆಗೆ ಮೈಸೂರಿನ ಇಬ್ಬರ ಹೆಸರನ್ನು ಶಿಫಾರಸು ಮಾಡಲಾಗಿದೆ.

ರಾಷ್ಟ್ರಕವಿ ಕುವೆಂಪು ಅವರ ಅಳಿಯ ಹಾಗೂ ಶಿವಮೊಗ್ಗ ಕುವೆಂಪು ವಿವಿ ವಿಶ್ರಾಂತ ಕುಲಪತಿಯಾದ ಪ್ರೊ.ಕೆ.ಚಿದಾನಂದ‌ಗೌಡ ಮತ್ತು ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಯಲಕ್ಷ್ಮಿ ಹೆಸರನ್ನ ಶಿಫಾರಸು ಮಾಡಲಾಗಿದೆ. ಮೈಸೂರಿನ ಸಂಘ ಸಂಸ್ಥೆಗಳು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ಗೆ ಶಿಫಾರಸು ಮಾಡಿವೆ.

ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ್ ಸಿಎಂ ಜೊತೆ ಚರ್ಚಿಸಿ ಅಂತಿಮವಾಗಿ ಉದ್ಘಾಟಕರ ಹೆಸರನ್ನ ಫೈನಲ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ