Breaking News

5ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

Spread the love

ಹುಬ್ಬಳ್ಳಿ: ಎನ್.ಪಿ.ಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಯಾವುದೇ ದಕ್ಕೆ ಉಂಟಾಗದಂತೆ ಪ್ರತಿಭಟನೆ ನಡೆಸಿದರು.ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ ಕುಟುಂಬ ಕಲ್ಯಾಣ ಇಲಾಖೆಗೆ ಇದ್ದು ನಮಗೂ ನೀಡಿ ಎಂದು ಒತ್ತಾಯಿಸಿದರು.

ವೈದ್ಯಕೀಯ ವಿದ್ಯಾಲಯದಲ್ಲಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಾರತಮ್ಯವನ್ನು ನಿಭಾಯಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಮೂಲ ವೇತನ ಶೇ.50ರಷ್ಟು ಹೆಚ್ಚುವರಿ ನೀಡಿ ಎಂದು ಸ್ಟಾಪ್ ನರ್ಸಿಂಗ್ ಸಿಬ್ಬಂದಿಯಿಂದ ಒತ್ತಾಯಸಿದ ಅವರು, ಬೇಡಿಕೆ ಈಡೇರಿರುವವರೆಗೂ ಕಪ್ಪು ಪಟ್ಟಿ ಧರಿಸಿಯೇ ಕೆಲಸ ಪ್ರಾರಂಭಿಸುತ್ತೇವೆ ಎಂದು ಪಟ್ಟು ಹಿಡಿದರು.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ