Breaking News

ಅರ್ಚಕರಿಗೆ, ದೇಗುಲ ನೌಕಕರಿಗೆ ಆರೋಗ್ಯ ವಿಮೆ ಜಾರಿಗೆ ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

Spread the love

ಬೆಂಗಳೂರು: ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ.

ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಕುರಿತು ಶೀಘ್ರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5 ನೇ ವೇತನ ಆಯೋಗದ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6 ನೇ ವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅನೇಕ ಶಾಸಕರಿಂದ ಹಲವಾರು ಬಾರಿ ಒತ್ತಡ ಬಂದಿರುವುದರಿಂದ ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ 35% ರಷ್ಟು ಮೀರದಂತೆ ನೌಕರರನ್ನು 6 ನೇ ವೇತನ ಆಯೋಗದ ವ್ಯಾಪ್ತಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದರು.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳ ಆಸ್ತಿ, ಮಾರ್ಗ ನಕ್ಷೆ, ಅಲ್ಲಿನ ಸೇವೆಗಳ ಸಂಪೂರ್ಣ ಮಾಹಿತಿಯನ್ನು ಆನ್ ಲೈನ್ ಮೂಲಕ ತಿಳಿದುಕೊಳ್ಳುವಂತೆ ಐಟಿಎಂಎಸ್ (ಇಂಟಿಗ್ರೆಟೆಡ್ ಟೆಂಪಲ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ಕ್ರಮ ವಹಿಸುವುದಾಗಿ ಸಚಿವರು ತಿಳಿಸಿದರು.

ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಗೂ ಇದು ಪೂರಕವಾಗಲಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು


Spread the love

About Laxminews 24x7

Check Also

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Spread the love ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್‌ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ