Breaking News

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಘೋಷಿಸಿದ ಜಮೀರ್ ಅಹ್ಮದ್

Spread the love

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಮೃತಪಟ್ಟ ಎರಡು ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಘೋಷಿಸಿದ್ದಾರೆ.

ನ್ಯೂ ತರಗುಪೇಟೆಯಲ್ಲಿ ನಿಗೂಢ ಸ್ಫೋಟ ಪ್ರಕರಣದಲ್ಲಿ ಮನೋಹರ್ ಮತ್ತು ಅಸ್ಲಮ್ ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ವೈಯಕ್ತಿಕವಾಗಿ ಪರಿಹಾರ ಮೊತ್ತ ಘೋಷಿಸಿದರು.

ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟರೆ ಐದು ಮಂದಿಗೆ ಗಾಯವಾಗಿದೆ. ಎಲ್ಲರೂ ಸ್ಥಳೀಯರೇ ಆಗಿದ್ದು, ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುತ್ತೇನೆ. ಸರಕಾರ ಕೂಡ ಪರಿಹಾರ ಮೊತ್ತ ನೀಡಲಿ ಎಂದು ಆಗ್ರಹಿಸಿದರು.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ತನಿಖೆ ಪೂರ್ಣ ಬಳಿಕ ಘಟ‌ನೆಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ಜಮೀರ್ ಅಹ್ಮದ್ ಹೇಳಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ