ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ದತ್ತಾಂಶ ವ್ಯವಸ್ಥಾಪಕ ಪ್ರವೀಣಕುಮಾರ, ಹಿರಿಯ ಆರೋಗ್ಯ ಸಹಾಕರಾದ ಡಿ.ಎಸ್.ಕೊಣ್ಣೂರ, ಬಡ್ಡಿ, ವ್ಯವಸ್ಥಾಪಕ ಹರಿಕಿರಣ ಇದ್ದರು.
ಬುಧವಾರ ನಡೆದ ಕೋವಿಡ್ ಲಸಿಕಾ ಮೇಳದಲ್ಲಿ ಸಂಜೆ 5.30ರ ಹೊತ್ತಿಗೆ ಜಿಲ್ಲೆಯಾದ್ಯಂತ ಒಟ್ಟು 33,192 ಜನರು ಲಸಿಕೆ ಪಡೆದುಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,30,262 ಜನ ಲಸಿಕೆ ಪಡೆದುಕೊಂಡಿದ್ದಾರೆ.
Laxmi News 24×7