ಚಿಕ್ಕಮಗಳೂರು: ಹೆತ್ತಮ್ಮನನ್ನು ಮಗನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ ನಡೆದಿದೆ.
ಸುಧಾ( 48 ) ಕೊಲೆಯಾದ ಮಹಿಳೆಯಾಗಿದ್ದು, ಮಗ ದುಶ್ಯಂತ್ (28) ಹೆತ್ತಮ್ಮನನ್ನೇ ಕೊಲೆ ಮಾಡಿದ್ದಾನೆ. ಇಂದು ಮಧ್ಯಾಹ್ನ ಘಟನೆ ನಡೆದಿದೆ ಎನ್ನಲಾಗಿದ್ದು, ಸಂಜೆ 5.45ರ ವೇಳೆಗೆ ಸುಧಾ ಅವರ ಕಿರಿಯ ಪುತ್ರ ಸಂತೋಷ್ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ.
ಘಟನೆ ಕುರಿತ ಮಾಹಿತಿ ಪಡೆದ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ದುಶ್ಯಂತ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸುಧಾ ಅವರನ್ನು ಕೊಲೆ ಮಾಡಿದ್ದ ದುಶ್ಯಂತ್ ತಾಯಿಯ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ದುಶ್ಯಂತ್ ಒಮ್ಮೊಮ್ಮೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎನ್ನಲಾಗಿದೆ.
Laxmi News 24×7