ಕೊಪ್ಪಳ : ಮಕ್ಕಳಿಗೆ ಕಂಪ್ಯೂಟರ್ ಜ್ಞಾನ ಬರಲಿ ಎಂಬ ನಿಟ್ಟಿನಲ್ಲಿ ಕಂಪ್ಯೂಟರ್ ಲ್ಯಾಬ್ ಗಳನ್ನು ತೆರೆಯಲಾಗಿದೆ. ಆದರೆ, ಖದೀಮರು ಮಾತ್ರ ಅವುಗಳನ್ನು ಬಿಡದೆ ದೋಚಿರುವ ಘಟನೆ ನಡೆದಿದೆ.
ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಲ್ಯಾಬ್ ಬಾಗಿಲು ಮುರಿದು ಒಳಗೆ ನುಗ್ಗಿದ್ದ ಖದೀಮರು 10 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಯಲಬುರ್ಗಾ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಕೊಠಡಿಯ ಬಾಗಿಲು ಮುರಿದಿರುವ ಖದೀಮರು, ಶಾಲೆಯಲ್ಲಿದ್ದ 10 ಕಂಪ್ಯೂಟರ್, ಒಂದು ಲ್ಯಾಪ್ ಟಾಪ್ ದೋಚಿದ್ದಾರೆ. ಇವುಗಳ ಒಟ್ಟು ಮೌಲ್ಯ ರೂ. 3.46 ಲಕ್ಷ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೇವೂರು ಪೊಲೀಸರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಕಳ್ಳರಿಗಾಗಿ ಜಾಲ ಬೀಸಲಾಗಿದೆ.
Laxmi News 24×7