ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ 69ರ ಅಡಿಯ ಚರ್ಚೆಯ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ, ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಆದಾಗ ಜನರು ಖುಷಿಪಟ್ಟಿದ್ದರು. ಆದರೆ ಯವುದೇ ರೀತಿಯ ಅಭಿವೃದ್ಧಿ ಆಗಿಲ್ಲ.
ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಈವರೆಗೆ ರಚನೆ ಆಗಿಲ್ಲ. ಯಾವುದೇ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ, ಒಂದೇ ಒಂದು ಸಭೆ ಕೂಡ ನಡೆದಿಲ್ಲ ಎಂದು ಹೇಳಿದರು. ಮಂಜೂರಾತಿ ಆದ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಸರ್ಕಾರ ಕೊಟ್ಟಿತ್ತು. ಆದ್ರೆ, ಕೋವಿಡ್ ನೆಪದಲ್ಲಿ ನೇರ ನೇಮಕಾತಿ ಹುದ್ದೆಗಳ ಭರ್ತಿ ತಡೆ ಹಿಡಿಯಲಾಗಿದೆ. 30
Laxmi News 24×7