Breaking News

ಕಬ್ಬಿನಗದ್ದೆಯಲ್ಲಿ ಬೆತ್ತಲೆ ಬಿದ್ದಿದ್ದ ಬಾಲಕಿ, ಅಮಾನವೀಯ ದೃಶ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎರಡು ವರ್ಷದ ಬಾಲಕಿ ಪತ್ತೆಯಾಗಿದ್ದಾಳೆ. ಬೆತ್ತಲೆ ಸ್ಥಿತಿಯಲ್ಲಿದ್ದ ಬಾಲಕಿಯ ಮೈಮೇಲೆ ಸಿಗರೇಟ್ ನಿಂದ ಸುಟ್ಟ ಗಾಯಗೊಳಿಸಲಾಗಿದೆ.

ಮಗುವಿನ ಮೈತುಂಬ ಸುಟ್ಟ ಗಾಯಗಳಾಗಿದ್ದು, ಬಾಲಕಿ ಎರಡು ದಿನಗಳ ಕಾಲ ಗದ್ದೆಯಲ್ಲಿ ನರಳಾಡಿದ್ದಾಳೆ. ನರಳಾಟದ ಸದ್ದು ಕೇಳಿ ಕಬ್ಬಿನ ಗದ್ದೆಯಲ್ಲಿ ಹುಡುಕಾಡಿದ ಗ್ರಾಮಸ್ಥರು ಅಮಾನವೀಯ ದೃಶ್ಯ ಕಂಡು ಬೆಚ್ಚಿಬಿದ್ದಿದ್ದಾರೆ.

ಬಾಲಕಿಯನ್ನು ರಕ್ಷಿಸಿ ಅಥಣಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಗುರುತು ಪತ್ತೆಯಾಗಿಲ್ಲ. ಆಕೆಗೆ ಚಿತ್ರಹಿಂಸೆ ನೀಡಲಾಗಿದೆ. ವಾಮಾಚಾರದ ಶಂಕೆ ವ್ಯಕ್ತವಾಗಿದೆ. ಮಗುವಿನ ಪೋಷಕರು ಯಾರೆಂಬುದು ಗೊತ್ತಾಗಿಲ್ಲ.

ಸ್ಥಳಕ್ಕೆ ಡಿವೈಎಸ್ಪಿ ಎಸ್. ಗಿರೀಶ್, ಸಿಪಿಐ ಶಂಕರಗೌಡ ಬಸನಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ