ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.
ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಇತ್ತೀಚಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊರೊನಾ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸುದ್ದಿ ತಿಳಿದು ಠಾಣೆಯ ಇತರ ಸಿಬ್ಬಂದಿ, ಪೇದೆಗೆ ಶಾಲು, ಹೂವಿನ ಮಾಲೆ ಹಾಕಿ ಸನ್ಮಾನ ಮಾಡಿದರು.