Breaking News

ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ

Spread the love

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ .ಮೈಸೂರಿನ ನಂಜನಗೂಡು ಮೂಲದ ಯುವತಿಗೆ ಮಂಗಳೂರು ಮೂಲದ ಮಹಮ್ಮದ್ ಆಜ್ವಾನ್ ಎಂಬಾತ ಲವ್ ಸೆಕ್ಸ್ ದೋಖಾ ಮಾಡಿರುವ ಆರೋಪ ಕೇಳಿ ಬಂದಿದ್ದು ಆರೋಪಿಯನ್ನು ಬೆಂಗಳೂರಿನಲ್ಲಿ ಸೆರೆ ಹಿಡಿಯಲಾಗಿದೆ .

ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿದ್ದಾನೆ ಅಲ್ಲದೇ ಯುವತಿಯ ನಗ್ನ ಫೋಟೋ ವೈರಲ್ ಮಾಡುವ ಬೆದರಿಕೆ ಒಡ್ಡಿ ಮೂವತ್ತೈದು ಲಕ್ಷ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ ಈ ಸಂಬಂಧ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಮೈಸೂರು ಮೂಲದ ಸಂತ್ರಸ್ತೆ ಪ್ರಕರಣದ ದಾಖಲಿಸಿದ್ದಳು ದೂರು ಹಿನ್ನೆಲೆಯಲ್ಲಿ ಆರೋಪಿ ಮೊಹಮ್ಮದ್ ಆಜ್ವಾನ್ ನನ್ನು ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಮೊಹಮ್ಮದ್‌ಆಜ್ವಾನ್ ಮಂಗಳೂರು ಮುಡಿಪು ನಿವಾಸಿ ಮೋಸ ಹೋದ ಯುವತಿ ಆರೋಪಿ ಮಹಮ್ಮದ್ ಆಜ್ವಾನ್ ಮನೆ ಹುಡುಕಿ ಕೊಂಡು ಮಂಗಳೂರಿಗೆ ಬಂದಿದ್ದಳು ಆದರೆ ಮೊಹಮ್ಮದ್ ಆಜ್ವಾನ್ ಕುಟುಂಬಸ್ಥರು ಯುವತಿಯ ಮೇಲೆ ಹಲ್ಲೆ ಮಾಡಿರುವ ಆರೋಪವಿದೆ ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು ಆತನನ್ನು ಮಂಗಳೂರು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ