Breaking News

ಇಂದಿನಿಂದ 3 ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಬಸವರಾಜ ಬೊಮ್ಮಾಯಿಗೆ, ಬೆಳಗಾವಿಯಲ್ಲಿ ರೈತರ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ

Spread the love

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ನೆರೆ ಸಂತ್ರಸ್ತ ರೈತರು, ಕಬ್ಬು ಬೆಳೆಗಾರರು ಇಂದಿನಿಂದ ಅಹೋರಾತ್ರಿ ಪ್ರತಿಭಟನೆಗೆ ತೀರ್ಮಾನಿಸಿದ್ದಾರೆ. ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು 200ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11ಕ್ಕೆ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಿಎಂ ಗಮನ ಸೆಳೆಯುವ ನಿಟ್ಟಿನಲ್ಲಿ ರೈತರು ಧರಣಿ ನಡೆಸಲಿದ್ದಾರೆ.

ಇಂದಿನಿಂದ 3 ದಿನ ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ:
ಇಂದಿನಿಂದ 3ದಿನಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರು, ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ರಾಜಭವನದ ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಅವರು ತುಮಕೂರಿಗೆ ತೆರಳಲಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಬಳಿಕ ಆರೋಗ್ಯ ಇಲಾಖೆಯ ನೂತನ ಆಸ್ಪತ್ರೆಗಳು, ಪ್ರವಾಸಿಮಂದಿರ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜಿಲ್ಲೆಗಳಲ್ಲಿ ಸಿಎಂ ಕಾರ್ಯಕ್ರಮಗಳು:
ಇಂದು ಸಂಜೆ 7.30ಕ್ಕೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿರುವ ಸಿಎಂ, ಪುರಸಭೆ ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ. ನಂತರ ನೂತನ ಬಸ್ ನಿಲ್ದಾಣದ ಕಟ್ಟಡವನ್ನು ಸಿಎಂ ಲೋಕಾರ್ಪಣೆಗೊಳಿಸಲಿದ್ದಾರೆ. ಇಂದು ರಾತ್ರಿ ಬೆಳಗಾವಿ ನಗರಕ್ಕೆ ಸಿಎಂ ತೆರಳಲಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಶಾಸಕ ಅಭಯ್ ಪಾಟೀಲ್ ಮನೆಗೆ ಸಿಎಂ ಭೇಟಿ ನೀಡಲಿದ್ದು, ನಂತರ ಪಾಲಿಕೆ ಬಿಜೆಪಿ ಸದಸ್ಯರಿಗೆ ಸನ್ಮಾನ ಮಾಡಲಿದ್ದಾರೆ. ಸುರೇಶ್ ಅಂಗಡಿ ಮೊದಲ ವರ್ಷದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಲಿದ್ದಾರೆ.

ಗದಗದಲ್ಲಿ ಆಕ್ಸಿಜನ್ ಪ್ಲಾಂಟ್ ಉದ್ಘಾಟನೆಯಲ್ಲಿ ಸೇರಿದಂತೆ, ನಾಳೆ ರಾತ್ರಿಯವರೆಗೆ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದು, ನಂತರ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ. ಸೋಮವಾರ ಬೆಳಗ್ಗೆ ವಿವಿಯ ಕಾರ್ಯಕ್ರಮ, ಪೊಲೀಸ್ ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಮುಖ್ಯಮಂತ್ರಿ ಬೊಮ್ಮಾಯಿ ವಾಪಸಾಗಲಿದ್ದಾರೆ.


Spread the love

About Laxminews 24x7

Check Also

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Spread the love ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್‌ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ