Breaking News

ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ವಿಚಾರವಾಗಿ ಹುಬ್ಬಳ್ಳಿ ಏರ್​​ಪೋರ್ಟ್​​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಾನು ಸದನದಲ್ಲೇ ಉತ್ತರವನ್ನ ನೀಡಿದ್ದೇನೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ರಿಗೂ ತಿಳಿಸಿದ್ದೇನೆ. ಅವರು ಸ್ವಾಮೀಜಿ ಜೊತೆ ಚರ್ಚೆಯನ್ನೂ ಮಾಡಿ ಬಂದಿದ್ದಾರೆ. ನಾನು ನಿರಂತರವಾಗಿ ಅವರ ಸಂಪರ್ಕದಲ್ಲಿ ಇದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವಿಚಾರವಾಗಿ ಅವರು ಪ್ತತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಮೂರು ವರ್ಷ ವಿವಿಧ ಹಂತದಲ್ಲಿ ಚರ್ಚೆ ಆಗಿದೆ. ಶಿಕ್ಷಣ ತಜ್ಞರು ಹಾಗೂ ಶ್ರೇಷ್ಠ ತಜ್ಞರ ಸಮಿತಿ ಚರ್ಚಿಸಿದೆ. 21ನೇ ಶತಮಾನಕ್ಕೆ ಬೇಕಿರುವ ಶಿಕ್ಷಣ ಜಾರಿ ಮಾಡಲಾಗಿದೆ. ನಮ್ಮ ಮಕ್ಕಳು ರಾಷ್ಟ್ರಮಟ್ಟದಲ್ಲಿ ಪೈಪೋಟಿ ನಡೆಸಬೇಕಾಗಿದೆ. ಅದಕ್ಕಾಗಿ ಕೌಶಲ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಬದಲಾವಣೆ ತರುವ ಕ್ರಮ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್ ನಡೆಯಲಿರುವ ಬಗ್ಗೆ ಬೊಮ್ಮಾಯಿ ಮಾತನಾಡಿದ್ದಾರೆ. ಜನರು ಕೊವಿಡ್ ನಂತರ ಈಗಷ್ಟೇ ಸುಧಾರಿಸಿಕೊಳ್ಳುತ್ತಿದ್ದಾರೆ. ಜನರಿಗೆ ತೊಂದರೆ ಆಗಬಾರದು, ಎಲ್ಲರು ಸಹಕಾರ ನೀಡ್ಬೇಕು. ಜನರ ಬದುಕು ಈಗಷ್ಟೇ ಸಹಜ ಸ್ಥಿತಿಗೆ ಬರುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ರಕ್ಷಣೆ ಬೇಕು. ಬಂದ್​ಗೆ ಕರೆ ಕೊಟ್ಟಿರೋದಕ್ಕೆ ನಾನ್ಯಾಕೆ ಪ್ರತಿಕ್ರಿಯೆ ನೀಡಲಿ. ಈಗ ತಾನೆ ಕೊವಿಡ್‌ನಿಂದ ಜನ ಹೊರಗಡೆ ಬಂದಿದ್ದಾರೆ. ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಚಟುವಟಿಕೆ ಶುರು ಆಗಿದೆ. ಬೇರೆ ಬೇರೆ ವೃತ್ತಿಯಲ್ಲಿ ಈಗಷ್ಟೇ ಕೆಲಸಗಳು ಶುರುವಾಗಿವೆ. ಅವರಿಗೆ ಯಾವುದೇ ರೀತಿ ತೊಂದರೆ ಆಗದಂತೆ ರಕ್ಷಣೆ ಬೇಕು ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ