ಜೈಪುರ: ರಾಜಸ್ಥಾನ ರಾಜಕೀಯ ದೊಂಬರಾಟಕ್ಕೆ ಫುಲ್ ಸ್ಟಾಪ್ ಬಿದ್ದಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಅವರು ಇಂದು ರಾಜಸ್ಥಾನ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಯಾಚನೆಯಲ್ಲಿ ಗೆಲುವುಕಂಡಿದ್ದಾರೆ.
ಡಿಸಿಎಂ ಸಚಿನ್ ಪೈಲಟ್ ಸೇರಿ ಅವರ ಬೆಂಬಲಿಗ ಶಾಸಕರು ಸರ್ಕಾರದ ವಿರುದ್ದ ಬಂಡಾಯ ಎದ್ದಿದ್ದರು. ಪರಿಸ್ಥಿತಿ ಲಾಭ ಪಡೆಯಲು ಬಿಜೆಪಿ ಮುಂದಾಗಿತ್ತು. ಚುನಾಯಿತ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸಿದ್ದಕ್ಕಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ಹೊರಿಸಿತು. ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದರೂ ಅವಿಶ್ವಾಸ ನಿರ್ಣಯಕ್ಕೆ ಒತ್ತಾಯಿಸರಲಿಲ್ಲ.
ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಚೀನ್ ಪೈಲಟ್ ಅವರ ಮನವೊಲಿಸಲು ಯಶಸ್ವಿಯಾಗಿತ್ತು. ಇಂದು ನಡೆದ ವಿಶೇಷ ಅಧಿವೇಶದಲ್ಲಿ ಕಾಂಗ್ರೆಸ್ ಬಹುಮತ ಸಾಬೀತು ಪಡಿಸಿದೆ.