ತುಮಕೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಸ್ವತಃ ಅವರ ಎದುರಲ್ಲೇ ಧಿಕ್ಕಾರ ಕೂಗಿದ ಘಟನೆ ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.
ತುಮಕೂರು ಗ್ರಾಮಾಂತರ ಜೆಡಿಎಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಮಹಿಳೆಗೆ ಅತ್ಯಾಚಾರವೆಸಗಿ ಕೊಲೆ ಆರೋಪಿಗಳನ್ನ ಬಂಧಿಸಲು ಈ ವೇಳೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪೊಲೀಸರು ಆರೋಪಿಗಳನ್ನ ಬಂಧಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಜೆಡಿಎಸ್ ಕಾರ್ಯಕರ್ತರು ಬಂದಿದ್ದರು.. ಕಾರ್ಯಕರ್ತರ ಮನವಿ ಪಡೆಯದೇ ಹೊರಟ ಸಿಎಂಗೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಆಗಸ್ಟ್ 24ರಂದು ತುಮಕೂರು ತಾಲೂಕಿನ ಚೋಟಾಸಾಬರಪಾಳ್ಯದಲ್ಲಿ ಅತ್ಯಾಚಾರ ಹಾಗೂ ಕೊಲೆ ನಡೆದಿತ್ತು.