Breaking News

ನಾಳೆ ಎಂದಿನಂತೆ ರಾಜ್ಯದಲ್ಲಿ ಸಂಚರಿಸಲಿದೆ ಸಾರಿಗೆ ಬಸ್

Spread the love

ಬೆಂಗಳೂರು : ಕೃಷಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಸಂಚರಿಸಲಿರುವ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಬಸ್ ಗಳಿಗೆ ಭದ್ರತೆ ಕೋರಿ ಪೊಲೀಸರಿಗೆ ಮನವಿ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ, ಸೋಮವಾರ ರಾಜ್ಯದಲ್ಲಿ ಎಂದಿನಂತೆ ಸಾರಿಗೆ ಬಸ್ ಸಂಚರಿಸಲಿದ್ದು, ಬಸ್ ಮತ್ತು ಸಂಸ್ಥೆಯ ಆಸ್ತಿಗೆ ಹಾನಿಯಾಗದಂತೆ ಭದ್ರತೆ ಒದಗಿಸಲು ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದರು.

ನಗರದಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರಕ್ಕೂ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಮೆಟ್ರೋ ರೈಲಿನ ಸಂಚಾರ ಕೂಡ ಎಂದಿನಂತೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ಎಂದಿನಂತೆ ಬಸ್ ಸಂಚಾರ ಇರುತ್ತದೆ, ರಾಜ್ಯದ ಎಲ್ಲಾ ಕಡೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಾರಿಗೆ ಬಸ್ ಗಳು ಸಂಚಾರ ನಡೆಸಲಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ