Breaking News

ಜಾತಿ ಸಮೀಕ್ಷೆ ಪ್ರಚಾರಕ್ಕೆ ಸೀಮಿತ: ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ವಾಗ್ದಾಳಿ

Spread the love

ರಾಮನಗರ: ‘ಜಾತಿ ಸಮೀಕ್ಷೆ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು‌ ಬೀದಿಯಲ್ಲಿ ಮಾತನಾಡುವುದು ಅವರ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ’ ಎಂದು ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಬಿಡದಿಯ ತೋಟದ ಮನೆಯಲ್ಲಿ ಭಾನುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಹತ್ತು ದಿನಗಳ ಕಾಲ ಸದನ ನಡೆದಿತ್ತು. ಸದನದಲ್ಲಿ ನಿಯಮ 69ರಲ್ಲಿ ಈ ವಿಚಾರವನ್ನು ಚರ್ಚೆಗೆ ತರಬಹುದಿತ್ತು. ಈ ಮೂಲಕ ರಾಜ್ಯದ ಜನತೆ ಮುಂದೆ ಸತ್ಯ ತೆರೆದಿಡಬಹುದಿತ್ತು. ಆದರೆ, ಅವರಿಗೆ ಅದರ ಅವಶ್ಯಕತೆ ಇಲ್ಲ‌. ಜಾತಿ ಸಮೀಕ್ಷೆ ಕೇವಲ‌ ಪ್ರಚಾರಕ್ಕೆ ಬೇಕಿದೆ ಎಂದರು.

ಸೋಮವಾರದ ಭಾರತ ಬಂದ್ ಕರೆ ಬೆಂಬಲಿಸಿದ ಅವರು ‘ರೈತರ ಹಿತದೃಷ್ಟಿಯಿಂದ ನಡೆಯುವ ಯಾವುದೇ ಹೋರಾಟಗಳಿಗೆ ನನ್ನ ಬೆಂಬಲ ಇದೆ’ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ