Breaking News
Home / ಜಿಲ್ಲೆ / ಮೈಸೂರ್ / ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ:ವಿಶ್ವನಾಥ್ ಆರೋಪಿ

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ:ವಿಶ್ವನಾಥ್ ಆರೋಪಿ

Spread the love

ಮೈಸೂರು:  ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ ಅಂತಾ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಡಿಜೆ ಹಳ್ಳಿ ಗಲಭೆ ವಿಚಾರವಾಗಿ  ಮಾತನಾಡಿದ ಅವರು, ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ.  . ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು ಎಂದು ವಾಗ್ದಾಳಿ ನಡೆಸಿದರು. 

ಸಿಎಎ ಹೋರಾಟದಲ್ಲಿ ವಿಪಕ್ಷಗಳು ಜನರನ್ನು ಉದ್ರೇಕಗೊಳಿಸಿದ್ದು, ಇನ್ನೂ ಬಿಸಿ ಕೆಂಡವಾಗಿ ಉಳಿದಿದೆ. ಆ ಕೆಂಡವನ್ನೇ ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದರು.

ಶಾಸಕ ಜಮೀರ್ ಅಹಮ್ಮದ್ ಬೆಂಕಿ ಬಿದ್ದ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ. ಬದಲಿಗೆ ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನ ಮಾಲೆ ಹಾಕಿ ಸ್ವಾಗತಿಸಿದ್ದರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಹೋಗಿದ್ದರಾ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

Spread the love ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ